ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಕೆ ಮಥಾಯ್ ಅವರು ಇಂದು ತಮ್ಮ ನಾಮಪತ್ರ ಸಲ್ಲಿಕೆಯನ್ನ ಮಾಡಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಶಾಂತಿನಗರ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೆ ಮಥಾಯ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಶಾಂತಿನಗರದ ವಿವೇಕನಗರದಲ್ಲಿ ಇರುವ ಸೇಂಟ್ ಬಿಸೋಸ್ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಳಿಕ ಆಪ್ ಪಕ್ಷದ ಅಭ್ಯರ್ಥಿ ಕೆ ಮಥಾಯ್ ಸೇರಿದಂತೆ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರೊಟ್ಟಿಗೆ ಬಿಸೋಸ್ ಚರ್ಚ್ ರಸ್ತೆಯಿಂದ ಗರುಡ ಮಾಲ್ ವರೆಗೆ ಬೃಹತ್ ರ್ಯಾಲಿ ನಡೆಸುವುದ ಮೂಲಕ ಶಾಂತಿನಗರ ಆರ್ ಟಿ ಒ ಚುನಾಮಣಾ ಅಧಿಕಾರಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ನಾಮಪತ್ರದಲ್ಲಿ ಸಲ್ಲಿಸಿದ್ದಾರೆ.

0 Comments