Ticker

6/recent/ticker-posts

Ad Code

Responsive Advertisement

BIG NEWS : 24 ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

ಬೆಂಗಳೂರು, ಮೇ 28 (ಕರ್ನಾಟಕ ವಾರ್ತೆ): ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು 24 ನೂತನ ಸಚಿವರಿಗೆ ರಾಜಭವನದ ಗಾಜಿನಮನೆಯಲ್ಲಿ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.

ರಾಜಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಅಧಿಕಾರ  ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.




ಹೆಚ್ ಕೆ ಪಾಟೀಲ್, ಕೃಷ್ಣಬೈರೇಗೌಡ, ಎನ್  ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ ಹೆಚ್. ಸಿ.ಮಹದೇವಪ್ಪ ಈಶ್ವರ್ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್,  ಶರಣಬಸಪ್ಪ ದರ್ಶನಾಪುರ. ಶಿವಾನಂದ ಪಾಟೀಲ್, ಆರ್.ಬಿ. ತಿಮ್ಮಾಪುರ್,  ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್, ಮಾಂಕಾಳ ವೈದ್ಯ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್,  ಡಾ.ಡಿ.ಸುಧಾಕರ್, ಸಂತೋಷ್ ಲಾಡ್, ಎನ್.ಎಸ್.ಬೋಸರಾಜು, ಬಿ. ಎಸ್.ಸುರೇಶ್ ( ಬೈರತಿ ಸುರೇಶ್ ),ಸಾರೇಕೊಪ್ಪ ಮಧು ಬಂಗಾರಪ್ಪ, ಎಂ. ಸಿ.ಸುಧಾಕರ್ ಹಾಗೂ ಬಿ.ನಾಗೇಂದ್ರ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಕಾರ್ಯಕ್ರಮ ಪ್ರಾರಂಭಿ‌ಲು ಅನುಮತಿ ಪಡೆದು ಸಮಾರಂಭವನ್ನು ನಿರ್ವಹಿಸಿ ನಿರೂಪಿಸಿದರು. ಸಮಾರಂದಲ್ಲಿ ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement