Ticker

6/recent/ticker-posts

Ad Code

Responsive Advertisement

BIG NEWS : ಮೇ 31, ಬೆಂಗಳೂರು ಹಾಗೂ ಇತರೆಡೆಗಳಲ್ಲಿ HEAVY RAIN ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ...!

ಬೆಂಗಳೂರು: ಬೆಂಗಳೂರಲ್ಲದೆ, ಕೆಲ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಮಳೆ ಅಲರ್ಟ್ ನೀಡಿದ್ದು, ಜಿಲ್ಲೆಗಳ ವಿವರ ಇಲ್ಲಿವೆ. ಮೇ 31 ರಂದು ಕೋಲಾರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಭಾರೀ ಮಳೆಯಾಗು ಮುನ್ನೆಚ್ಚರಿಕೆ ಇರುವುದರಿಂದ ಈ ಜಿಲ್ಲೆಗಳಿಗೆ ಒಂದು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಬಿರುಗಾಳಿ ಸಹಿತ ಗಂಟೆಗೆ 40 ಕಿ.ಮೀ ವೇಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಮುನ್ನೆಚ್ಚರಿಕೆ. ರಾಜ್ಯದಲ್ಲಿ ಐದು ದಿನ ಮಳೆಯ ಮುನ್ಸೂಚನೆ, ಕರಾವಳಿ ಭಾಗಕ್ಕೆ ಎಚ್ಚರಿಕೆ ನೀಡಲಾಗಿದೆ. 

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕಾ ಕ್ರಮಗಳು: ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ. ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ. ತಕ್ಷಣವೇ ವಿದ್ಯುತ್‌ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್ಪ್ಲಗ್ ಮಾಡಿ. ತಕ್ಷಣವೇ ಜಲಮೂಲಗಳಿಂದ ಹೊರಬನ್ನಿ. ವಿದ್ಯುಚ್ಛಕ್ತಿಯನ್ನು ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ. ನೀವು ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ.

ಹವಾಮಾನ ಇಲಾಖೆಯ ವಿಜ್ಞಾನಿ ಪ್ರಸಾದ್ ಮಾತನಾಡಿ, ದಕ್ಷಿಣ ತೆಲಂಗಾಣದಲ್ಲಿ ಸಮುದ್ರ ಮಟ್ಟದಲ್ಲಿ ಸುಳಿಗಾಳಿ ಇದೆ. ದಕ್ಷಿಣ ಚತ್ತೀಸ್ಘಡದಲ್ಲಿ ಒಂದು ಟ್ರಫ್ ಕಾಣುತ್ತಿದೆ. ರಾಜ್ಯದಲ್ಲಿ ಮುಂದಿನ 5 ದಿನಗಳ ಮಳೆ ಮುನ್ಸೂಚನೆ ನೋಡುವುದಾದರೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನ ಮಳೆ ಹೆಚ್ಚಿರುವ ಸಾಧ್ಯತೆ ಇದೆ ಎಂದಿದ್ದಾರೆ. ದಕ್ಷಿಣ ಒಳನಾಡಿನಲ್ಲಿ 2 ದಿನ ಹಲವು ಕಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ ಒಂದರ ವರೆಗೂ ಹಲವು ಕಡೆ ಮಳೆಯಾಗಲಿದೆ. 2 ನೇ ತಾರೀಕು ಕೆಲವೆಡೆ ಮಾತ್ರ ಮಳೆಯಾಗಲಿದೆ ಎಂದಿದ್ದಾರೆ. ಉತ್ತರ ಒಳನಾಡಿಗೆ ಮಳೆಯ ಪ್ರಮಾಣ ಕಡಿಮೆ ಇದ್ದು, ಮುಂದಿನ ಐದು ದಿನ ಕೆಲವು ಕಡೆಗಳಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಯೆಲ್ಲೋ ಅಲರ್ಟ್ ಘೋಷÀಣೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 31 ರಂದು ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 31 ರಂದು ಈ ಭಾಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

Post a Comment

0 Comments

Ad Code

Responsive Advertisement