ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 25, ಗುರುವಾರ ಸಂಜೆ 7-30ಕ್ಕೆ "ಹರಿದಾಸ ಮಂಜರಿ" ಕಾರ್ಯಕ್ರಮ ಏರ್ಪಡಿಸಿದೆ.
ಶ್ರೀಮತಿ ಗೀತಾ ಭತ್ತದ ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ, ತಬಲಾ ವಾದನದಲ್ಲಿ ಶ್ರೀ ಶ್ರೀನಿವಾಸ ಕಾಖಂಡಕಿ ಅವರು ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

0 Comments