Ticker

6/recent/ticker-posts

Ad Code

Responsive Advertisement

ಡಾ. ಪದ್ಮಿನಿ ನಾಗರಾಜು ಅವರಿಗೆ ʻಆರ್ಯಭಟʼ ಪ್ರಶಸ್ತಿ ಪ್ರದಾನ

 ಆರ್ಯಭಟ ಸಾಂಸ್ಕೃತಿಕ ಸಂಸ್ಥೆ(ರಿ)ಯ ೪೮ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.  ಸಾಹಿತ್ಯ ಕ್ಷೇತ್ರದಲ್ಲಿ ಮೌಲಿಕ ಸೇವೆ ಸಲ್ಲಿಸಿದ ಹಿರಿಯ ಲೇಖಕಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು ಅವರಿಗೆ ಈ ಸಾಲಿನ ʻಆರ್ಯಭಟʼ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ, ಕನ್ನಡಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅದ್ಯಕ್ಷರು ಹಾಗೂ ಚಲನಚಿತ್ರ ನಿರ್ದೇಶಕರಾದ ಶ್ರೀ ಟಿ.ಎಸ್. ನಾಗಾಭರಣ ಹಾಗೂ ಆರ್ಯಭಟ ಸಾಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಚ್.ಎಲ್.ಎನ್ ರಾವ್  ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement