Ticker

6/recent/ticker-posts

Ad Code

Responsive Advertisement

ಬಿಗ್ ನ್ಯೂಸ್: ಗ್ಯಾರಂಟಿ ಸ್ಕೀಮ್” ಸಹಿಸುವುದಿಲ್ಲ- ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿದ ತಕ್ಷಣ ರಾಜ್ಯದ ವಿವಿಧ ಕಡೆಗಳಲ್ಲಿ “ಹಿಂಸಾ ಗ್ಯಾರಂಟಿ ಸ್ಕೀಮ್” ಅನ್ನು ಜಾರಿಗೆ ತಂದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. 



ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಇದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ. 

ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು ಎಂದವರು ಎಚ್ಚರಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು ಇದನ್ನು ನಿಯಂತ್ರಿಸಬೇಕು ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದವರು ತಿಳಿಸಿದ್ದಾರೆ. 

ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಟ್ಟು ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Post a Comment

0 Comments

Ad Code

Responsive Advertisement