ಬೆಂಗಳೂರು : ನಗರದ ರವೀಂದ್ರ ಕಾಲಾಕ್ಷೇತ್ರದಲ್ಲಿ ಇತ್ತೀಚಿಗೆ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಆಧ್ಯಾತ್ಮಿಕ ಸಾಧನೆಯ ಮೂಲಕ ಸಮಾಜಕ್ಕೆ ಅಪೂರ್ವವಾದ ಸೇವೆಯನ್ನು ಸಲ್ಲಿಸುತ್ತಿರುವ ಶ್ರೀ ಯೋಗಿ ಚಂದ್ರಶೇಖರ್ ಗುರೂಜಿ ಅವರಿಗೆ 2023 ನೇ ಸಾಲಿನ 48 ನೇ ವಾರ್ಷಿಕ ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಇದೇ ವೇಳೆ ಇನ್ನೂ ವಿವಿಧ ರಂಗಗಳಲ್ಲಿ ನಿರತರಾಗಿ ಸಮಾಜಕ್ಕೆ ತಮ್ಮ ವಿಶಿಷ್ಠ ಸೇವೆಗಳನ್ನು ಸಲ್ಲಿಸುತ್ತಿರುವ ಇತರೆ 56 ಸಾಧಕರುಗಳಿಗೂ ಆರ್ಯಭಟ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸುಸಂಧರ್ಭದಲ್ಲಿ ಚಲನಚಿತ್ರ ರಂಗದ ಖ್ಯಾತ ನಿರ್ದೇಶಕರು ಹಾಗೂ ನಿರ್ಮಾಪಕರು ಎಸ್. ನಾಗಭರಣ ಮುಂತಾದ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

0 Comments