ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕಾಂಗ್ರೆಸ್ ಗ್ಯಾರಂಟಿಯಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಚಾರವಾಗಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನಿಗಮದ ಪ್ರಯಾಣಿಕರ ಸಂಖ್ಯೆ ಮತ್ತು ಬಸ್ಸುಗಳ ಸಂಖ್ಯೆ ,ವಾರ್ಷಿಕ ಆದಾಯದ ಬಗ್ಗೆ ಸಮಗ್ರ ಮಾಹಿತಿ ಪಡೆದರು.
ನಂತರ ಈ ವಿಚಾರವಾಗಿ ಮಾತನಾಡಿದ ಅವರು ಇಲಾಖೆ ಅಧಿಕಾರಿಗಳು 3-4 ಆಯ್ಕೆಯನ್ನು ಕೊಟ್ಟಿದ್ದಾರೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ಜೂನ್ ಒಂದರಂದು ಮುಖ್ಯಮಂತ್ರಿಗಳು ಅಧಿಕೃತ ಘೋಷಣೆ ಮಾಡಲಿದ್ದಾರೆ. ಬಿಜೆಪಿಯವರಿಗೆ ಹೋರಾಟ ಮಾಡೋಕೆ ಅವಕಾಶವೇ ಇಲ್ಲ. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದು ತಿಳಿಸಿದರು.

0 Comments